ಗುರುಗ್ರಾಮ: ನಿರ್ಮಾಣ ಹಂತದಲ್ಲಿ ಇರುವ ಕಟ್ಟಡವೊಂದು ಕುಸಿದು ಬಿದ್ದು ಅದರಲ್ಲಿ ಎಂಟು ಮಂದಿ ಕಾರ್ಮಿಕರು ಸಿಲುಕಿರುವ ಶಂಕೆಯಿದೆ.
ಗುರುವಾರ ಬೆಳಗ್ಗೆ 5 ಗಂಟೆಗೆ ಇಲ್ಲಿನ ಉಲ್ಲಾವಾಸ್ ಪ್ರದೇಶದಲ್ಲಿ ಈ ಘಟನೆಯು ನಡೆದಿದೆ. ಹರಿಯಾಣದ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಇದುವರೆಗೆ ಯಾವುದೇ ರೀತಿಯ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲವೆಂದು ವರದಿಗಳು ತಿಳಿಸಿವೆ.