Categories: ವಿದೇಶ

ನೇಪಾಳದಲ್ಲಿ ಹೊಸ ಸರಕಾರ ರಚನೆಗೆ ಅಧ್ಯಕ್ಷೆ ಆಹ್ವಾನ

ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ನೇತೃತ್ವದ ಸರ್ಕಾರಕ್ಕೆ ವಿಶ್ವಾಸ ಮತಯಾಚನೆ ವೇಳೆ ಸೋಲುಂಟಾದ ನಂತರ ನೇಪಾಳ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ಗುರುವಾರದೊಳಗೆ ಹೊಸ ಸರ್ಕಾರ ರಚಿಸುವಂತೆ ಬಹುಮತವಿರುವ ಪಕ್ಷಗಳಿಗೆ ಆಹ್ವಾನ ನೀಡಿದ್ದಾರೆ.

ಒಲಿ ಆಡಳಿತ ವಿಶ್ವಾಸಮತಯಾಚನೆಯಲ್ಲಿ ಸೋಲನನುಭವಿಸಿದ ನಂತರ ನೇಪಾಳದ ಸಂವಿಧಾನದ 76 (2)ನೇ ವಿಧಿಯ ಅನ್ವಯ ಅಧ್ಯಕ್ಷೆ ಭಂಡಾರಿ ಅವರು ಹೊಸ ಸರ್ಕಾರ ರಚನೆಗೆ ಬಹುಮತವಿರುವ ಪಕ್ಷಗಳನ್ನು ಆಹ್ವಾನಿಸಲು ನಿರ್ಧರಿಸಿದರು ಎಂದು ರಾಷ್ಟ್ರಪತಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಂವಿಧಾನಿಕ ನಿಬಂಧನೆಯ ಪ್ರಕಾರ, ಸರ್ಕಾರ ರಚಿಸುವ ಪಕ್ಷವು ಸಂಸತ್ತಿನಲ್ಲಿ ಎರಡು ಅಥವಾ ಹೆಚ್ಚಿನ ರಾಜಕೀಯ ಪಕ್ಷಗಳಿಗೆ ಸೇರಿದ ಶಾಸಕರ ಸಹಿಯನ್ನು ನಿಗದಿತ ಸಮಯದೊಳಗೆ ಅಧ್ಯಕ್ಷರ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

ಅಧ್ಯಕ್ಷರ ಸೂಚನೆಯಂತೆ ವಿರೋಧ ಪಕ್ಷಗಳು ಇದೀಗ ಸರ್ಕಾರ ರಚನೆಯ ಪ್ರಯತ್ನಕ್ಕೆ ಮುಂದಾಗಿದ್ದು, ಮುಂಚೂಣಿಯಲ್ಲಿ ನೇಪಾಳಿ ಕಾಂಗ್ರೆಸ್‌ ಇದೆ. ನೇಪಾಳಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಮುಂದಾದರೆ ಅದಕ್ಕೆ ಬೆಂಬಲ ನೀಡುವುದಾಗಿ ಜನತಾ ಸಮಾಜವಾದಿ ಪಕ್ಷ ಮತ್ತು ಸಿಪಿಎನ್‌ ಪಕ್ಷಗಳು ಘೋಷಿಸಿವೆ.

ಸದ್ಯ ಸಂಸತ್ತಿನಲ್ಲಿ ಅಧಿಕ ಸಂಖ್ಯಾ ಬಲ ಇರುವುದು ಕೆ.ಪಿ.ಶರ್ಮಾ ಒಲಿ ಅವರಿಗೇ. ಮತ್ತೊಮ್ಮೆ ಅವರನ್ನೇ ನೇಮಕ ಮಾಡಿದರೆ 30 ದಿನದೊಳಗೆ ಅವರು ಮತ್ತೆ ಬಹುಮತವನ್ನು ಸಾಬೀತುಪಡಿಸಬೇಕಾಗುತ್ತದೆ.

Desk

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

21 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

31 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

36 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

43 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

53 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

57 mins ago