ಖಠ್ಮಂಡು: ನೇಪಾಳದ ಖಠ್ಮಂಡುವಿನಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ 382 ಮನೆಗಳು ಜಲಾವೃತಗೊಂಡಿವೆ. ಹಲವು ವಸತಿ ಪ್ರದೇಶಗಳು ಹಾನಿಗೊಳಗಾಗಿವೆ.
ಖಠ್ಮಂಡುವಿನಲ್ಲಿ ನಾಲ್ಕು ಗಂಟೆಗಳಲ್ಲಿ 105 ಮಿ.ಮೀ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ 100ಕ್ಕೂ ಹೆಚ್ಚು ಪ್ರದೇಶಗಳು ಜಲಾವೃತವಾಗಿವೆ. ಕಳೆದ ರಾತ್ರಿ ನೇಪಾಳ ಪೊಲೀಸ್ ಪಡೆ, ಶಸ್ತ್ರಾಸ್ತ್ರ ಪೊಲೀಸ್ ಪಡೆ, ನೇಪಾಳ ಸೇನೆಯು 138 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ ಎಂದು ಮೆಟ್ರೊಪಾಲಿಟನ್ ಪೊಲೀಸ್ ಕಚೇರಿಯ ವಕ್ತಾರ ಸುಶೀಲ್ ಸಿಂಗ್ ರಾಥೋರ್ ಅವರು ಹೇಳಿದರು.