ವಾಯುವ್ಯ ನೈಜೀರಿಯಾ ಮಾರುಕಟ್ಟೆಯಲ್ಲಿ ಜಾನುವಾರು ಕಳ್ಳರು ನಡೆಸಿದ ಗುಂಡಿನ ದಾಳಿಗೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಸ್ಥಳೀಯ ಕಣ್ಗಾವಲುಗಾರರು ನಡೆಸಿದ ಕಾರ್ಯಾಚರಣೆಯಲ್ಲಿ 11 ಡಕಾಯಿತರು ಮೃತಪಟ್ಟಿದ್ದರು. ಅದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು.