News Karnataka Kannada
Saturday, May 04 2024
ವಿದೇಶ

ಪರ್ವತ ರಾಜ್ಯಗಳಲ್ಲಿ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ

Photo Credit :

ಪರ್ವತ ರಾಜ್ಯಗಳಲ್ಲಿ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ

ನವದೆಹಲಿ: ಪರ್ವತ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ: ಉತ್ತರಾಖಂಡ್, ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆದರೆ, ರಾಜಸ್ತಾನದಲ್ಲಿ ಧೂಳು ಬಿರುಗಾಳಿ ಬೀಳುವ ಸಾಧ್ಯತೆಗಳು ಹೆಚ್ಚಿವೆ ಎಂದು ವರದಿಯಲ್ಲಿ ತಿಳಿದು ಬಂದಿದೆ.

ಪಶ್ಚಿಮ ಭಾಗದಲ್ಲಿ ಗುಡುಗು ಮಿಂಚಿನ ವಾತಾವರಣದಿಂದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ತೀವ್ರ ಬಿರುಗಾಳಿ ಮುನ್ಸೂಚನೆ: ತೀವ್ರ ಬಿರುಗಾಳಿ ದಕ್ಷಿಣ ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ, ತೆಲಂಗಾಣ, ಉತ್ತರ ಕರಾವಳಿ ಆಂಧ್ರ ಪ್ರದೇಶ, ಲಕ್ಷದ್ವೀಪ, ಬಿಹಾರ, ಚತ್ತೀಸ್ ಗಢ, ವಿದರ್ಭ, ದೆಹಲಿ, ಪಂಜಾಬ್, ಹರ್ಯಾಣ ಮೊದಲಾದ ಪ್ರದೇಶಗಳಲ್ಲಿ ತೀವ್ರ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು