News Karnataka Kannada
Tuesday, May 07 2024
ವಿದೇಶ

ಪಾಕಿಸ್ತಾನಕ್ಕೆ ಟ್ರಮಡಾಲ್ ಡ್ರಗ್‌ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ನಾಲ್ವರ ಬಂಧನ

Industrialist's suicide case: Main accused arrested
Photo Credit :

ಬೆಂಗಳೂರು: ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ  ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ್ರಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ, ಉದ್ಯಮಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನಲ್ಲಿ ತಮ್ಮ ವಶಕ್ಕೆ ಪಡೆದಿದ್ದಾರೆ.

ತೆಲಂಗಾಣದಲ್ಲಿರುವ ಈ ಕಂಪನಿಯು ಯಾವುದೇ ಪರವಾನಗಿ ಇಲ್ಲದೆ ಪಾಕಿಸ್ತಾನಕ್ಕೆ ವಾರ್ಷಿಕವಾಗಿ 25 ಸಾವಿರ ಕೆ‌ಜಿ ಟ್ರಮಡಾಲ್ ಡ್ರಗ್ ರಫ್ತು ಮಾಡುತ್ತಿತ್ತು. ಡೆನ್ಮಾರ್ಕ್, ಜರ್ಮನಿ, ಮಲೇಷ್ಯಾಗೂ ಈ ಔಷಧಿಯನ್ನು ರಫ್ತು ಮಾಡುತ್ತಿತ್ತು. ಹೀಗಾಗಿ ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ದಾಳಿ ನಡೆಸಿದ ಎನ್ ಸಿಬಿ ಅಧಿಕಾರಿಗಳು ಫಾರ್ಮಾ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು