News Karnataka Kannada
Friday, May 03 2024
ವಿದೇಶ

ಪಾಕಿಸ್ತಾನ ಎರಡನೇ ಮನೆ ಇದ್ದಂತೆ: ತಾಲೀಬಾನ್

Taliban
Photo Credit :

ಕಾಬೂಲ್, ;ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ ಎಂದು ತಾಲಿಬಾನ್ ಹೇಳಿದೆ. ಉಗ್ರರನ್ನು ಪೋಷಿಸಲಾಗುತ್ತಿದೆ ಎನ್ನುವ ಆರೋಪ ಪಾಕಿಸ್ತಾನದ ವಿರುದ್ಧ ಕೇಳಿಬಂದಿರುವ ನಡುವೆಯೇ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಯಿದ್ದೀನ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ವ್ಯಾಪಾರ-ವಹಿವಾಟು ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಬೇರೆ ಬೇರೆ ಎಲ್ಲ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನದೊಂದಿಗೆ ಮುಂದಿನ ದಿನಗಳಲ್ಲಿ ವ್ಯಾಪಾರ-ವಹಿವಾಟು ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲಾಗುವುದು ಎಂದು ಅವರು ತಿಳಿಸಿದ್ದಾರೆ. ಆಫ್ಘಾನಿಸ್ಥಾನ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿದೆ ಜೊತೆಗೆ ಭಾಷೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಎರಡು ದೇಶಗಳ ನಡುವೆ ಸಾಮ್ಯತೆ ಇದೆ ಎಂದು ಹೇಳಿರುವ ಅವರು ಮುಂದಿನ ದಿನಗಳಲ್ಲಿ ಪಾಕಿಸ್ತಾನದೊಂದಿಗೆ ಉತ್ತಮ ಸ್ನೇಹ ಸಂಬಂಧವನ್ನು ಬಯಸುತ್ತಿರುವುದಾಗಿ ಹೇಳಿದ್ದಾರೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣವಾಗಿ ವಶಕ್ಕೆ ಪಡೆಯುವ ವಿಷಯದಲ್ಲಿ ಪಾಕಿಸ್ತಾನದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು , ಪಾಕಿಸ್ತಾನದ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರೆ ತೊಯಿಬಾ ಕೂಡ ಯಾವುದೇ ನೆರವು ನೀಡಿಲ್ಲ ಎಂದು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರ ಸೇರಿದಂತೆ ವಿವಿಧ ವಿಷಯಗಳ ಕುರಿತು ಭಾರತ ಮತ್ತು ಪಾಕಿಸ್ತಾನ ಕುಳಿತು ಚರ್ಚೆ ನಡೆಸಿ ಸಮಸ್ಯೆಗೆ ಪರಿಹಾರಕಂಡುಕೊಳ್ಳಲು ಎಂದು ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ತಿಳಿಸಿದ್ದಾನೆ.ಭಾರತ ಸೇರಿದಂತೆ ಜಗತ್ತಿನ ಎಲ್ಲ ದೇಶಗಳ ನಡುವೆ ಉತ್ತಮ ಸ್ನೇಹ ಸಂಬಂಧ ಒಂದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು