News Karnataka Kannada
Friday, May 03 2024
ವಿದೇಶ

ಪಾಕ್ ಪ್ರಧಾನಿ ಸರಣಿ ಟ್ವೀಟ್ ಬೆನ್ನಲ್ಲೇ ಭಯೋತ್ಪಾದನೆ ನಿಗ್ರಹ ಕುರಿತು ಭಾರತೀಯ ಸೇನೆ ಸ್ಪಷ್ಟನೆ

Photo Credit :

ಪಾಕ್ ಪ್ರಧಾನಿ ಸರಣಿ ಟ್ವೀಟ್ ಬೆನ್ನಲ್ಲೇ ಭಯೋತ್ಪಾದನೆ ನಿಗ್ರಹ ಕುರಿತು ಭಾರತೀಯ ಸೇನೆ ಸ್ಪಷ್ಟನೆ

ಉಧಮ್ ಪುರ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರಣಿ ಟ್ವೀಟ್ ನಂತರ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ಕುರಿತು ಭಾರತ ಸೇನೆ ಸ್ಪಷ್ಟನೆ ನೀಡಿದೆ. ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದದ ಹೊರತಾಗಿಯೂ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.

ಉಧಮ್ ಪುರದಲ್ಲಿ ಯೋಧರಿಗೆ ಪದಕ ಪ್ರದಾನ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸೇನೆಯ ನಾರ್ಥರ್ನ್‌ ಕಮಾಂಡರ್‌ ಲೆಫ್ಟಿನೆಂಟ್‌ ಜನರಲ್‌ ವೈ.ಕೆ. ಜೋಶಿ, ‘ಗಡಿ ನಿಯಂತ್ರಣ ರೇಖೆಯಲ್ಲಿ ಘೋಷಿಸಿರುವ ಕದನ ವಿರಾಮದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಗಳ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಭದ್ರತಾ ಪಡೆಗಳು ಸದಾ ಕಟ್ಟೆಚ್ಚರವಹಿಸಿವೆ ಎಂದು ಹೇಳಿದ್ದಾರೆ.

ನಮ್ಮ ದೇಶದ ಮೇಲೆ ದುಷ್ಟ ನೋಟ ಬೀರಿದಾಗ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ, ಹಾಗೆ ಮುಂದೆಯೂ ನೀಡುತ್ತದೆ. ಗಡಿಯಲ್ಲಿ ಎದುರಾಗಿರುವ ಎಲ್ಲ ಸವಾಲುಗಳನ್ನು ಸೇನೆ ಸಮರ್ಥವಾಗಿ ಎದುರಿಸಿದೆ. ಇನ್ನು ಮುಂದೆಯೂ ನಾವು ಸದಾ ಕಟ್ಟೆಚ್ಚರವಹಿಸುತ್ತೇವೆ. ನಮ್ಮ ನೆರೆಯ ದೇಶಗಳು ಗಲಭೆ ಸೃಷ್ಟಿಸುವ ಪ್ರಯತ್ನಗಳನ್ನು ತಡೆಯುವಲ್ಲಿ ನಾರ್ಥರ್ನ್‌ ಕಮಾಂಡ್‌ ಪ್ರಮುಖ ಪಾತ್ರವಹಿಸಿದೆ. ಕವಚದ ರೀತಿಯಲ್ಲಿ ಯೋಧರು ಎಲ್ಲ ಸವಾಲುಗಳನ್ನು ಎದುರಿಸಿದ್ದಾರೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು