ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2.50 ರೂ ಇಳಿಕೆ ಮಾಡಿರುವುದಾಗಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಕಳೆದ ಕೆಲ ತಿಂಗಳಿಂದ ಇಂಧನ ಬೆಲೆಯು ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಸಭೆ ನಡೆಸಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಲು ನಿರ್ಧರಿಸಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.