ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ.
ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಬಿಜೆಪಿ ನಡುವೆ ಟ್ವಿಟ್ಟರ್ ವಾರ್ ನಡೆದಿದೆ.
ಪೊಲೀಸರ ನ್ಯೂ ಗೆಟಪ್: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ‘ತ್ರಿಶೂಲಾ’ಸ್ತ್ರ ಪ್ರಯೋಗ
ಪ್ರಧಾನಿ ನರೇಂದ್ರ ಮೋದಿಯನ್ನು ಏಕವಚನದಲ್ಲಿ ನಿಂದಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಗರಂ ಆಗಿದೆ. ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಪ್ರಧಾನ ಸೇವಕ ಹುದ್ದೆಯಲ್ಲಿರುವ ಗಣ್ಯರ ಬಗ್ಗೆ ಮಾತನಾಡುವ ಮುನ್ನ ಎಚ್ಚರ ವಹಿಸಿ. ಪ್ರಧಾನಿ ಬಗ್ಗೆ ಮಾತನಾಡಿ ನಿಮ್ಮ ಕೀಳು ಮಟ್ಟ ಅನಾವರಣ ಮಾಡಿದ್ದೀರಿ ಎಂದು ಕಿಡಿಕಾರಿದೆ.