ದುಬೈ: ದುಬೈನಲ್ಲಿ ಹವಮಾನ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, “ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು. ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ