Categories: ವಿದೇಶ

ಪ್ರಧಾನಿ ಸಚಿವಾಲಯದ ಮೆಟ್ಟಲೇರಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ

ನವದೆಹಲಿ : ಮೈಸೂರು ಜಿಲ್ಲೆಯಲ್ಲಿ ಐಎಎಸ್ ಅಧಿಕಾರಿಗಳ ನಡುವೆ ನಡೆದಿದ್ದ ವಾದ-ಪ್ರತಿವಾದಗಳ ನಂತರ ಅವರ ವರ್ಗಾವಣೆ ಮಾಡಲಾಗಿತ್ತು. ಇಷ್ಟಾದ ಮೇಲೆಯೂ ಈ ಚರ್ಚೆ ಮುಂದುವರೆದಿದ್ದು, ಜಿಲ್ಲಾಧಿಕಾರಿ ರೋಹಿನಿ ಸಿಂಧುರಿ ವರ್ಗಾವಣೆ ಪ್ರಕರಣ ಇದೀಗ ಪ್ರಧಾನಿ ಸಚಿವಾಲಯದ ಮೆಟ್ಟಿಲೇರಿದೆ.  

 

 ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರ ಹೊಂದಿದೆ . ಆದರೆ ಸೇವಾ ನಿಯಮಗಳು ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿವೆ . ರೋಹಿಣಿ ಸಿಂಧೂರಿ ಅವರು ವರ್ಗಾವಣೆಯಾದ ಬಳಿಕ ಹಲವು ವ್ಯಕ್ತಿಗಳು ಪತ್ರ ಮತ್ತು ಈ ಮೇಲ್ ಮೂಲಕ ಪ್ರಧಾನಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ .

 

 ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ಸಂಕಲ್ಪ ತೊಟ್ಟಿದ್ದ ಅಧಿಕಾರಿಯೊಬ್ಬರನ್ನು ದಿಢೀರ್ ವರ್ಗ ಮಾಡಲಾಗಿದೆ . ಇದು ಜಿಲ್ಲಾಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ಎಂಬ ಆಶಯಕ್ಕೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ . ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪ್ರಧಾನಿ ಸಚಿವಾಲಯ ಸ್ಪಷ್ಟಿಕರಣ ಕೇಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ . 

 

ಜತೆಗೆ ಮೈಸೂರಿನಲ್ಲಿ ಸದ್ದು ಮಾಡಿರುವ ಭೂ ಹಗರಣವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ . ಈ ಎಲ್ಲ ಮಾಹಿತಿಯನ್ನು ರೋಹಿಣಿ ಸಿಂಧೂರಿ ಮೇಲಿನ ಅಭಿಮಾನದಿಂದ ಕೆಲವು ವ್ಯಕ್ತಿಗಳು ಪ್ರಧಾನಿ ಸಚಿವಾಲಯಕ್ಕೆ ರವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago