ನವದೆಹಲಿ: ಗಾಂಧಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗಿದ್ದು, ಪ್ರಿಯಾಂಕಾ ವಾದ್ರಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಆಗಿ ನೇಮಕ ಮಾಡಲಾಗಿದೆ.
ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇದು ತುಂಬಾ ಮಹತ್ವದ ನಿರ್ಧಾರವೆಂದು ಪರಿಗಣಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಎಸ್ ಪಿ ಹಾಗೂ ಬಿಎಸ್ ಪಿ ಕಾಂಗ್ರೆಸ್ ನ್ನು ಹೊರಗಿಟ್ಟು ಮೈತ್ರಿ ಮಾಡಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅದಕ್ಕೆ ತಿರುಗೇಟು ನೀಡಿದ್ದು, ಪ್ರಿಯಾಂಕಾ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿಸುವ ಮಹತ್ವದ ನಿರ್ಧಾರ ಮಾಡಿದೆ.
ಪ್ರಿಯಾಂಕಾ ವಾದ್ರಾ ಅವರು ಸೋನಿಯಾ ಗಾಂಧಿ ಸ್ಪರ್ಧಿಸುತ್ತಿದ್ದ ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.