News Karnataka Kannada
Saturday, May 11 2024
ವಿದೇಶ

ಬಸ್‌ ಲಾರಿ ಮುಖಾಮುಖಿ ಢಿಕ್ಕಿ ; 30 ಸಾವು , 40 ಜನರಿಗೆ ಗಾಯ

Bus Truck Mishap 19 7 21
Photo Credit :

ಇಸ್ಲಾಮಾಬಾದ್‌ : ಪಾಕಿಸ್ತಾನದ ದೇರಾ ಘಾಜಿ ಬಳಿ ಪ್ರಯಾಣಿಕರ ಬಸ್‌ ಮತ್ತು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ 30 ಮಂದಿ ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
‘ಬಸ್‌ ಸಿಯಾಲ್‌ಕೋಟ್‌ನಿಂದ ಪಂಜಾಬ್‌ ಪ್ರಾಂತ್ಯದ ರಾಜನ್‌ಪುರಕ್ಕೆ ಹೋಗುತ್ತಿದ್ದಾಗ ಸಿಂಧೂ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಹೆಚ್ಚಿನವರು ಕಾರ್ಮಿಕರಾಗಿದ್ದು, ಅವರು ಬಕ್ರೀದ್‌ ಹಬ್ಬಕ್ಕಾಗಿ ಮನೆಗೆ ಹೋಗುತ್ತಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ಹೇಳಿವೆ. ‘ಡೇರಾ ಘಾಜಿ ಬಳಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಚಾಲಕರು ಪ್ರಯಾಣಿಕರ ಸುರಕ್ಷತೆಗಾಗಿ ಜಾಗೂರೂಕರಾಗಿ ಬಸ್‌ ಚಲಾಯಿಸಬೇಕು’ ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ್ ಚೌಧರಿ ಅವರು ಟ್ವೀಟ್‌ ಮಾಡಿದ್ದಾರೆ.
‘ಬಸ್‌ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿ, ಅಪಘಾತ ಸಂಭವಿಸಿರಬಹುದು’ ಎಂದು ಪೊಲೀಸರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು