ನವದೆಹಲಿ: ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವಯಂ ಕ್ಲಾರಂಟೈನ್ ಆಗಿದ್ದಾರೆ.
ಈ ಬಗ್ಗೆ ಉಮಾಭಾರತಿ ಅವರು ಟ್ವೀಟ್ ಮಾಡಿದ್ದು, ‘ತಾವು ಕೊರೊನಾ ಸೋಂಕಿಗೆ ತುತ್ತಾಗಿದ್ದು, 10 ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.
‘ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕಿರುವುದು ಪತ್ತೆಯಾಗಿತ್ತು. ಪ್ರಸ್ತುತ ತಾವು ಹೃಷಿಕೇಶದಲ್ಲಿದ್ದು, ಇಲ್ಲಿನ ವಂದೇ ಮಾತರಂ ಕುಂಜ್ ನಲ್ಲಿ ಸ್ವಯಂ ಕ್ಲಾರಂಟೈನ್ ಆಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ಕು ದಿನಗಳ ಬಳಿಕ ಮತ್ತೆ ಟೆಸ್ಟ್ ಗೆ ಒಳಪಡುತ್ತೇನೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟ್ ಮಾಡಿದ್ದಾರೆ.