Categories: ವಿದೇಶ

ಬ್ಯಾಂಕ್ ಗಳಿಗೆ ಸಂಪೂರ್ಣ ಸಾಲ ಮರುಪಾವತಿಸುವುದಾಗಿ ಹೇಳಿದ್ದೆ: ವಿಜಯ್ ಮಲ್ಯ

ನವದೆಹಲಿ: ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವಂತಹ ಮದ್ಯ ದೊರೆ ವಿಜಯ್ ಮಲ್ಯ, ತಾನು ಬ್ಯಾಂಕ್ ಗಳಿಗೆ ಶೇ.100ರಷ್ಟು ಸಾಲ ಮರುಪಾವತಿಸಲು ನಿರ್ಧರಿಸಿದ್ದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಿಂಗ್ ಫಿಷರ್ ಏರ್ ಲೈನ್ಸ್ ನಷ್ಟಕ್ಕೆ ಒಳಗಾಗಲು ದುಬಾರಿ ಎಟಿಎಫ್ ಬೆಲೆಗಳೇ ಕಾರಣವಾಗಿದೆ. ಕಿಂಗ್ ಫಿಷರ್ ಸಮಯದಲ್ಲಿ ಕಚ್ಚಾ ತೈಲದ ಬೆಲೆಯು ಬ್ಯಾರೆಲ್ ಗೆ 140 ಡಾಲರ್ ಆಗಿತ್ತು. ಇದರಿಂದ ನಷ್ಟವಾಯಿತು ಮತ್ತು ಬ್ಯಾಂಕ್ ಗಳ ಹಣ ಹೋಯಿತು. ನಾನು ಶೇ.100ರಷ್ಟು ಸಾಲ ಮರುಪಾವತಿ ಮಾಡುವುದಾಗಿ ತಿಳಿಸಿದ್ದೆ.

ಮಲ್ಯ ವಿವಿಧ ಬ್ಯಾಂಕ್ ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ಬಾಕಿಯಿರಿಸಿಕೊಂಡಿದ್ದಾರೆ. ಇದರ ಬಳಿಕ 2016ರ ಮಾರ್ಚ್ ನಲ್ಲಿ ಅವರು ದೇಶ ಬಿಟ್ಟು ಪಲಾಯನ ಮಾಡಿದ್ದರು.

ಕಳೆದ ಫೆಬ್ರವರಿಯಲ್ಲಿ ಭಾರತ ಸರ್ಕಾರವು ಮಲ್ಯ ಅವರನ್ನು ಭಾರತಕ್ಕೆ ಒಪ್ಪಿಸುವಂತೆ ಇಂಗ್ಲೆಂಡ್ ಗೆ ಮನವಿ ಮಾಡಿಕೊಂಡಿತ್ತು. ಈ ಬಗ್ಗೆ ಅಲ್ಲಿನ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.

Desk

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

55 mins ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

1 hour ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

2 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

3 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

3 hours ago