ವಿದೇಶ

ಬ್ರಿಟನ್ ನಲ್ಲಿ ಹೆಚ್ಚಿದ ಕೊರೋನಾರ್ಭಟ : ಒಂದೇ ದಿನಕ್ಕೆ 51,342 ಪ್ರಕರಣಗಳು ಪತ್ತೆ

ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ ಸೋಂಕು, ಬ್ರಿಟನ್ ನಲ್ಲಿ ಮತ್ತೆ ತನ್ನ ಆರ್ಭಟ ಹೆಚ್ಚಿಸಿದೆ. ಒಂದೇ ದಿನಕ್ಕೆ 51,342 ಪ್ರಕರಣಗಳು ಪತ್ತೆಯಾಗುವ ಮೂಲಕ ಮತ್ತೊಂದು ಅಲೆಯ ಆತಂಕ ಮೂಡಿಸಿದೆ.

ಕೋವಿಡ್ ನ ರೂಪಾಂತರಿ ಒಮಿಕ್ರಾನ್ ಸೋಂಕು ಕೂಡ ಬ್ರಿಟನ್ ನಲ್ಲಿ ಹೆಚ್ಚಾಗಿದ್ದು, ಈವರೆಗೂ 568 ಒಮಿಕ್ರಾನ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ತಜ್ಞರು ಬ್ರಿಟನ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮುಂದಿನ ದಿನಗಳಲ್ಲಿ ದೇಶದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕು ನಿಯಂತ್ರಿಸಲು ಜನರಿಗೆ ಅನುಕೂಲವಾಗುವಂತೆ ವರ್ಕ್ ಫ್ರಂ ಹೋಂ ನಿಯಮ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಬಹುದಾಗಿದೆ. ಕೆಲವು ಪ್ರದೇಶಗಳಲ್ಲಿ ಮಾಸ್ಕ್ ಜತೆಗೆ ಲಸಿಕೆ ಪ್ರಮಾಣ ಪತ್ರ ಕೂಡ ಕಡ್ಡಾಯಗೊಳಿಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ವೇಗವಾಗಿ ಹರಡುತ್ತಿರುವ ಒಮಿಕ್ರಾನ್ ಸೋಂಕು ತಡೆಯಲು ಮುಂದಿನ ದಿನಗಳಲ್ಲಿ ಎಲ್ಲರೂ ಬೂಸ್ಟರ್ ಡೋಸ್ ಪಡೆಯಬೇಕು ಎಂದು ಪ್ರಧಾನಿ ಜಾನ್ಸನ್ ಒತ್ತಾಯಿಸಿದ್ದಾರೆ.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

22 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

47 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago