ಅಪರಿಚಿತ ವ್ಯಕ್ತಿಯೋರ್ವ ಬ್ರಿಟನ್ ಪ್ರಧಾನಿ ಬೋರಿಸ್ ಜನ್ಸನ್ ಅವರ ಕನ್ಸರ್ವೇಟಿವ್ ಪಕ್ಷದ ಸಂಸದ ಡೇವಿಡ್ ಅಮೆಸ್(69) ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಡೇವಿಡ್ ಬೆಲ್ಛೇಸ್ ಮೆಥೋಡಿಸ್ಟ್ ಚರ್ಚ್ ನಲ್ಲಿ ತಮ್ಮ ಕ್ಷೇತ್ರದ ಮತದಾರರೊಂದಿಗೆ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ಸಂಸದ ಡೇವಿಡ್ ಮೇಲೆ ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆಗೈದಿದ್ದಾನೆ.
ತೀವ್ರ ರಕ್ತಸ್ರಾವದಿಂದ ಡೇವಿಡ್ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಡೇವಿಡ್ ಮೃತಪಟ್ಟಿದ್ದಾರೆ. 25 ವರ್ಷದ ಶಂಕಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಡೇವಿಡ್ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಮತದಾರರದೊಂಗೆ ಸಭೆ ನಡೆಸುತ್ತಿದ್ದರು.