News Karnataka Kannada
Sunday, April 28 2024
ವಿದೇಶ

ಭಾರತದಲ್ಲಿ 44,489 ಹೊಸ ಕೊರೋನಾ ಪ್ರಕರಣ ದೃಢ

Photo Credit :

ಭಾರತದಲ್ಲಿ 44,489 ಹೊಸ ಕೊರೋನಾ ಪ್ರಕರಣ ದೃಢ

ನವದೆಹಲಿ: ಕಳೆದ 24 ಗಂಟೆಯ ಅವಧಿಯಲ್ಲಿ ಭಾರತದಲ್ಲಿ ಒಟ್ಟು 44.489 ಹೊಸ ಕೋವಿಡ್ -19 ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು 92,66,706 ಕೊರೋನಾ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರದ ಅಂಕಿ ಅಂಶದಲ್ಲಿ ತಿಳಿಸಿದೆ.

24 ಗಂಟೆಗಳ ಅವಧಿಯಲ್ಲಿ 524 ಜನರು ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,35,223ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣದಲ್ಲಿ 4,52,344 ಸಕ್ರಿಯ ಪ್ರಕರಣಗಳಿದ್ದು, 86,79,138 ಜನರು ಚೇತರಿಸಿಕೊಂಡಿದ್ದಾರೆ. ಸತತ 19ನೆ ದಿನ 50,000ಕ್ಕಿಂತ ಕಡಿಮೆ ಕೊರೋನಾ ಪ್ರಕರಣಗಳು ದೃಢಪಟ್ಟಿವೆ.

ಐಸಿಎಂಆರ್ ಪ್ರಕಾರ ನವೆಂಬರ್ 25ರವರೆಗೆ ಒಟ್ಟು 13,59,31,545 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. ನಿನ್ನೆ 10,90,238 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕೊರೋನಾ ಪಾಸಿಟಿವ್ ದರವು 6.84% ಗೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
204

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು