ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851 ಕ್ಕೆ ತಲುಪಿದೆ.
ಇನ್ನು ಒಂದೇ ದಿನ 563 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಕೂಡ 1,21,090ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ಈ ನಡುವೆ ನಿನ್ನೆ ಒಂದೇ ದಿನ 57,386 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಗುಣಮುಖರಾದವರ ಸಂಖ್ಯೆ 73,73,375ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,94,386ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,64,648 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,77,28,088 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.