Categories: ವಿದೇಶ

ಭಾರತದೊಂದಿಗೆ ಬಾಂಧವ್ಯ ನಿರೀಕ್ಷಿಸುತ್ತೋದ್ದೇವೆ – ತಾಳಿಬಾನ್ ವಕ್ತಾರ್

ಕಾಬೂಲ್: ಆಫ್ಘಾನಿಸ್ತಾನವನ್ನು  ಆಕ್ರಮಿಸಿದ ತಾಲಿಬಾನ್  ಈಗ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಅದರ ಬೆನ್ನಲ್ಲೇ ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ ಬಯಸುತ್ತಿದೆ ಎಂದು ತಾಲಿಬಾನ್ ಮುಖಂಡ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ನಿಯಂತ್ರಣಕ್ಕೆ ಪಡೆದು, ತಮ್ಮದೇ ಸಾಮ್ರಾಜ್ಯ ಕಟ್ಟಿ ಆಳ್ವಿಕೆ ನಡೆಸಲು ಮುಂದಾಗಿರುವ ತಾಲಿಬಾನ್​ ಇದೀಗ ಭಾರತದೊಂದಿಗೆ ಸಂಬಂಧ ಬೆಳೆಸುವ ಇಚ್ಛೆ ವ್ಯಕ್ತಪಡಿಸಿದೆ. ಈ ಕುರಿತಂತೆ ತಾಲಿಬಾನ್ ನಾಯಕ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಹೇಳಿಕೆ ನೀಡಿದ್ದು, ‘ಅಫ್ಘಾನಿಸ್ತಾನದ ತಾಲಿಬಾನ್​ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ ಎಂದು ಹೇಳಿದ್ದಾರೆ.
ಇನ್ನು ಮೂಲಗಳ ಪ್ರಕಾರ ತಾಲಿಬಾನ್ ಮುಖಂಡ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಈ ಹಿಂದೆ ಭಾರತದ ಡೆಹ್ರಾಡೂನ್​ನಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದರು ಎನ್ನಲಾಗಿದೆ. ತರಬೇತಿ ಬಳಿಕ ಅಫ್ಘಾನಿಸ್ತಾನಕ್ಕೆ ಹೋಗಿದ್ದ ಮೊಹಮ್ಮದ್ ಅಬ್ಬಾಸ್ ಸ್ಟ್ಯಾನಿಕಜೈ ಅಫ್ಘನ್ ಮಿಲಿಟರಿ ಸೇರಿಕೊಳ್ಳುವ ಬದಲು ತಾಲಿಬಾನ್ ಕಡೆಗೆ ಒಲವು ವ್ಯಕ್ತಪಡಿಸಿ ಆ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ. ಈಗ ಅಫ್ಘಾನಿಸ್ತಾನದ ಬಹುಭಾಗವನ್ನು ತಾಲಿಬಾನ್ ವಶಪಡಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ, ಅಫ್ಘಾನಿಸ್ತಾನದ ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ ಎಂದು ಹೇಳಿದ್ದಾನೆ.
Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

40 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

54 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago