ನವದೆಹಲಿ : ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ ಅಫ್ಘಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವುದು ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ದೋಹಾ ಒಪ್ಪಂದದ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ತಾಲಿಬಾನ್ ಉಲ್ಲಂಘಿಸಿದ್ದಾರೆ ಎಂದು ಅವರು ಹೇಳಿದರು.
ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಅಮೆರಿಕ ಮತ್ತು ತಾಲಿಬಾನ್ ಮುಖಂಡರ ನಡುವಣ ನಡೆದ ದೋಹಾ ಶಾಂತಿ ಒಪ್ಪಂದದಲ್ಲಿ ಕಾಬೂಲ್ ಸರ್ಕಾರ ಅಫ್ಘಾನಿಸ್ತಾನದ ಎಲ್ಲಾ ವರ್ಗದ ಜನರನ್ನು ಪ್ರತಿನಿಧಿಸುವುದು, ಧಾರ್ಮಿಕ ಸ್ವಾತಂತ್ರ ಹಾಗೂ ಪ್ರಜಾಪ್ರಭುತ್ವಕ್ಕೆ ಅವಕಾಶ ಕಲ್ಪಿಸುವುದು ಸೇರಿದಂತೆ ಮತ್ತಿತರ ಅನೇಕ ಭರವಸೆಗಳನ್ನು ನೀಡಲಾಗಿತ್ತು.