News Karnataka Kannada
Monday, April 29 2024
ವಿದೇಶ

ಭಾರತ ಹಾಗೂ ರಷ್ಯಾದ ನಡುವಿನ ವಾರ್ಷಿಕ ಶೃಂಗಸಭೆಗಾಗಿ ವ್ಲಾದಿಮಿರ್ ಪುಟಿನ್ ಭಾರತಕ್ಕೆ

Vladimir Putin
Photo Credit :

ಕೋವಿಡ್ ಪರಿಸ್ಥಿತಿ ಸುಧಾರಿಸಿದ ಬಳಿಕ ಇದೀಗ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 6ರಂದು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ.

ಭಾರತ ಹಾಗೂ ರಷ್ಯಾದ ನಡುವಿನ ವಾರ್ಷಿಕ ಶೃಂಗಸಭೆಗಾಗಿ ವ್ಲಾದಿಮಿರ್ ಪುಟಿನ್ ಭಾರತಕ್ಕೆ ಬರಲಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ದೆಹಲಿಯ ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬಾರಿ ಭಾರತದಲ್ಲಿ ನಡೆಯುತ್ತಿರುವ ವಾರ್ಷಿಕ ಶೃಂಗ ಸಭೆಯಲ್ಲಿ ಉಭಯ ರಾಷ್ಟ್ರಗಳ ವ್ಯಾಪಾರ ಹೂಡಿಕೆ, ಸೇನಾ ಸಲಕರಣೆಗಳ ಉತ್ಪಾದನೆ, ನೈಸರ್ಗಿಕ ಅನಿಲ ಬಳಕೆ, ಕಲ್ಲಿದ್ದಲು ಗಣಿಗಾರಿಕಾ ಯೋಜನೆಗಳ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ.

2018ರಲ್ಲಿ ಪುಟಿನ್‌ ಭಾರತಕ್ಕೆ ಭೇಟಿ ನೀಡಿದಾಗ ಉಭಯ ದೇಶಗಳ ನಡುವೆ ಎಸ್ 400 ವಾಯು ರಕ್ಷಣಾ ವ್ಯವಸ್ಥೆಗಳ ಒಪ್ಪಂದ ನಡೆದಿತ್ತು. ಇದರ ಮೊದಲ ಬ್ಯಾಚ್ ಈ ವರ್ಷದ ಅಂತ್ಯದ ವೇಳೆಗೆ ಭಾರತಕ್ಕೆ ಬರಲಿದೆ. 2019ರಲ್ಲಿ ರಷ್ಯಾದಲ್ಲಿ ನಡೆದ ಶೃಂಗ ಸಭೆಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು