Categories: ವಿದೇಶ

ಭಾರತ: 90 ದಿನಗಳಲ್ಲಿ 11.70 ಕೋಟಿ ಜನರಿಗೆ ಕೊರೊನಾ ಲಸಿಕೆ!

ನವದೆಹಲಿ, ; ಕೊರೊನಾವೈರಸ್ ಸಾಂಕ್ರಿಮಿಕ ರೋಗದ ಹರಡುವಿಕೆ ವೇಗ ದಿನೇ ದಿನೆ ಹೆಚ್ಚುತ್ತಿದೆ. ಕೊವಿಡ್-19 ಸೋಂಕು ಅಂಟಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ಲಸಿಕೆ ವಿತರಣೆ ಕಾರ್ಯವನ್ನು ನಡೆಸಲಾಗುತ್ತಿದೆ.
ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 90 ದಿನ ಕಳೆದಿದೆ. ಈವರೆಗೂ 11.70 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಗುರುವಾರ ಒಂದೇ ದಿನ 26,02,375 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 20,59,873 ಫಲಾನುಭವಿಗಳಿಗೆ ಮೊದಲ ಡೋಸ್, 5,42,502 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 11,70,96,037 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ. ದೇಶದಲ್ಲಿ 90,82,153 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 56,33,982 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,02,90,850 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 51,51,557 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,86,76,098 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,84,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ4,41,90,147 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 30,86,465 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Desk

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

23 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

45 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

52 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago