Categories: ವಿದೇಶ

ಮಲ್ಯ ವಿರುದ್ಧ ಮುಂಬೈ ಕೋರ್ಟ್‌ ಸಮನ್ಸ್

ಮುಂಬೈ: ವಿವಿಧ ಬ್ಯಾಂಕ್‌ಗಳಿಂದ ₹9,000 ಕೋಟಿ ಸಾಲ ಪಡೆದು, ಮರು ಪಾವತಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 27ರಂದು ವಿಚಾರಣೆಗೆ ಹಾಜರಾಗುವಂತೆ ಮುಂಬೈನ ಪಿಎಂಎಲ್ಎ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್‌ ಮಲ್ಯ ಅವರಿಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಆರ್ಥಿಕ ಅಪರಾಧಗಳ ತಡೆ ಸುಗ್ರೀವಾಜ್ಞೆ ಅಡಿ ಮಲ್ಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಾರಿ ನಿರ್ದೇಶನಾಲಯವು ಇತ್ತೀಚೆಗೆ  ಪಿಎಂಎಲ್ಎ ನ್ಯಾಯಾಲಯಕ್ಕೆ ಎರಡನೇ ಆರೋಪ ಪಟ್ಟಿ ಸಲ್ಲಿಸಿತ್ತು. ಒಂದು ವೇಳೆ ಮಲ್ಯ ಆಗಸ್ಟ್‌ 27ರಂದು ನ್ಯಾಯಾಲಯದ ಎದುರು ಹಾಜರಾಗದಿದ್ದರೆ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸುವ ಮತ್ತು ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ.

ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸುವಂತೆ ಜಾರಿ ನಿರ್ದೇಶನಾಲಯ ಕಳೆದ ವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ₹12,500 ಕೋಟಿ ಮೌಲ್ಯದ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ಕೋರಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿತ್ತು. ಆರ್ಥಿಕ ಅಪರಾಧಿಗಳನ್ನು ಮಟ್ಟ ಹಾಕಲು ಕೇಂದ್ರ ಜಾರಿಗೆ ತಂದ ಆರ್ಥಿಕ ಅಪರಾಧಗಳ ತಡೆ ಸುಗ್ರೀವಾಜ್ಞೆ ಅಡಿ ಇದೇ ಮೊದಲ ಬಾರಿಗೆ ಕ್ರಮ ಜರುಗಿಸಲಾಗುತ್ತಿದೆ.

Desk

Recent Posts

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

30 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

47 mins ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

59 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

1 hour ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

1 hour ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2 hours ago