ಮುಂಬಯಿ: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡುವ ಬಗ್ಗೆ ಕೂಡ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕೊರೋನಾ ಸೋಂಕು ದಿನೇ ದಿನೇ ಮಹಾರಾಷ್ಟ್ರದಲ್ಲಿ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಇದನ್ನು ನಿಯಂತ್ರಿಸುವ ಸಲುವಾಗಿ ಯಾವ ಕ್ರಮ ತೆಗೆದುಕೊಳ್ಳಬಹುದು ಎನ್ನುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಕೈಮೀರಿ ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಬಿಜೆಪಿ ಸಂಸದ ನಾರಾಯಣ ರಾಣೆ ಅವರು ರಾಜ್ಯಪಾಲ ಬಿ.ಎಸ್. ಕೋಶಿಯಾರಿ ಅವರನ್ನು ಮನವಿ ಮಾಡಿಕೊಂಡಿದ್ದಾರೆ.