ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಸಾಧ್ಯತೆಗಳು ಹೆಚ್ಚಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಹೇಳಿದ್ದಾರೆ.
ಅದನ್ನು ನಿಭಾಯಿಸಲು ದೆಹಲಿ ಸರ್ಕಾರ ಯುದ್ಧ ಸನ್ನದ್ಧ ರೀತಿ ತಯಾರಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಬ್ರಿಟನ್ ನಿಂದ ಮೂರನೇ ಅಲೆಯ ಸೂಚನೆಗಳು ಬರುತ್ತಿವೆ. ಶೇಕಡಾ 45ರಷ್ಟು ವ್ಯಾಕ್ಸಿನೇಷನ್ ಹೊರತಾಗಿಯೂ ಪ್ರಕರಣಗಳು ಅಲ್ಲಿ ಹೆಚ್ಚುತ್ತಿವೆ. ಆದ್ದರಿಂದ, ನಾವು ಸುಮ್ಮನೆ ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿದರು.