21ನೇ ಎಸ್ ಸಿಒ ವಾರ್ಷಿಕ ಶೃಂಗಸಭೆ ತಜಕಿಸ್ತಾನದ ದುಶಾಂಬೆಯಲ್ಲಿ ನಡೆಯುತ್ತಿದ್ದು, ವರ್ಚುವಲ್ ಮೂಲಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಾದೇಶಿಕ ಸಮಸ್ಯೆಗಳ “ಮೂಲ ಕಾರಣ” ಮೂಲಭೂತವಾದ. ಅಫಘಾನಿಸ್ತಾನದ ಇತ್ತೀಚೆಗಿನ ಬೆಳವಣಿಗೆಗಳು ಇದನ್ನು ಪುಷ್ಠಿಕರಿಸುತ್ತದೆ ಎಂದು ಹೇಳಿದರು.
“ಈ ಪ್ರದೇಶದ ದೊಡ್ಡ ಸವಾಲುಗಳು ಎಂದರೆ ಶಾಂತಿ, ಭದ್ರತೆ ಮತ್ತು ವಿಶ್ವಾಸದ ಕೊರತೆ ಎಂದು ನಾನು ನಂಬುತ್ತೇನೆ. ಈ ಸಮಸ್ಯೆಗಳ ಮೂಲ ಕಾರಣ ಹೆಚ್ಚುತ್ತಿರುವ ಮೂಲಭೂತವಾದ. ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳು ಈ ಸವಾಲನ್ನು ಹೆಚ್ಚು ಸ್ಪಷ್ಟಪಡಿಸಿದೆ” ಎಂದು ಪ್ರಧಾನಿ ಹೇಳಿದರು.