Categories: ವಿದೇಶ

ಮೃತದೇಹವನ್ನು ಸ್ವದೇಶಕ್ಕೆ ಕಳುಹಿಸಲು ಫೇಸ್ ಬುಕ್ ನಲ್ಲಿ ಸಹಾಯಹಸ್ತ ಯಾಚಿಸಿದ ಕುಟುಂಬಸ್ಥರಿಗೆ ಸ್ಪಂದಿಸಿದ ಇಂಡಿಯನ್ ಸೋಶಿಯಲ್ ಫೋರಂ

ಬುರೈದ: ಸೌದಿ ಅರೇಬಿಯದಲ್ಲಿ ಹೃದಯಾಘಾತದಿಂದ ಮೃತಪಟ್ಟ ಭಾರತದ ಉತ್ತರ ಪ್ರದೇಶದ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕ ನೆರವಾಗಿದೆ. ಬುರೈದ ನಗರದಲ್ಲಿ ಸ್ಟೀಲ್ ಕಂಪನಿಯೊಂದರಲ್ಲಿ ದುಡಿಯುತ್ತಿದ್ದ ಸುಮಾರು 31 ವರ್ಷ ಪ್ರಾಯದ ರೆಹಾನ್ ಖಾನ್ ಎನ್ನುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯು ದಿನಾಂಕ   25-೦7-2021 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು.

ಅಸಮರ್ಪಕ ದಾಖಲೆಗಳ ಕಾರಣ ಮೃತದೇಹವನ್ನು ಬುರೈದಾದ ಸೆಂಟ್ರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿತ್ತೆಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವೈರಲ್ ಸುದ್ದಿಯ ಜಾಡುಹಿಡಿದ ಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕದ ರಶೀದ್ ಉಚ್ಚಿಲ ಮತ್ತು ಜಮಾಲುದ್ದೀನ್ ಪಾಂಡೇಲ್ ರವರ ಸಹಕಾರದೊಂದಿಗೆ ತಕ್ಷಣ ಮೃತ ವ್ಯಕ್ತಿಯ ಕುಟುಂಬಿಕರನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳನ್ನು ಪಡೆಯಲಾಯಿತು. ಅದೇ ರೀತಿ ಭಾರತೀಯ ರಾಯಭಾರಿ ಕಚೇರಿ ಮತ್ತು ಸ್ಥಳೀಯ ಸರಕಾರಿ ಕಚೇರಿಗಳನ್ನು ಸಂಪರ್ಕಿಸಿ ಎಲ್ಲಾ ಅಸಮರ್ಪಕ ದಾಖಲೆಗಳನ್ನು ಸರಿಪಡಿಸಿ ಅಂತಿಮವಾಗಿ
ದಿನಾಂಕ 03-09-2021 ರಂದು ಮೃತದೇಹವನ್ನು ಊರಿಗೆ ಕಳುಹಿಸಲು ಯಶಸ್ವಿಯಾದರು.

ರೆಹಾನ್ ಖಾನ್ ರವರ ಅಕಾಲಿಕ ಮರಣಕ್ಕೆಇಂಡಿಯನ್ ಸೋಶಿಯಲ್ ಫೋರಂ ಬುರೈದ ಘಟಕವು ತೀವ್ರ ಸಂತಾಪ ಸೂಚಿಸಿದೆ. ಅದೇ ರೀತಿ ಇಂಡಿಯನ್ ಸೋಶಿಯಲ್ ಫೋರಂನ ಈ ಸತ್ಕಾರ್ಯಕ್ಕೆ ಮೃತರ ಕುಟುಂಬಸ್ಥರು ಧನ್ಯವಾದ ಸಲ್ಲಿಸಿದ್ದಾರೆ.

Sneha Gowda

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

17 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

26 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

26 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

41 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

47 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

59 mins ago