Categories: ವಿದೇಶ

ಮೊದಲ ಬಾರಿಗೆ ಮಹಿಳೆಯರಿಂದಲೇ ಹಜ್ ಯಾತ್ರೆ

ನವದೆಹಲಿ: 45 ವರ್ಷ ಮೇಲ್ಪಟ್ಟ 1,308 ಮಹಿಳೆಯರು ಇದೇ ಮೊದಲ ಬಾರಿ ಪುರುಷ ಜೊತೆಗಾರರಿಲ್ಲದೇ ಭಾರತದಿಂದ ಹಜ್ ಯಾತ್ರೆ ಕೈಗೊಂಡಿದ್ದಾರೆ. 

‘ಭಾರತದ ಮಹಿಳೆಯರು ಹಜ್ ಯಾತ್ರೆಗೆ ತೆರಳುವ ವೇಳೆ ಪುರುಷರ ಸಂಗಡ (ಮೆಹ್ರಂ) ತೆರಳಬೇಕಿತ್ತು. ಈ ಬಾರಿ 1,308 ಮಹಿಳೆಯರು ತಾವೇ ಯಾತ್ರೆ ಕೈಗೊಂಡಿದ್ದಾರೆ’ ಎಂದು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್‌ ನಕ್ವಿ ತಿಳಿಸಿದ್ದಾರೆ.

‘ದೇಶದಿಂದ 1,75,025 ಮಂದಿ ಹಜ್ ಯಾತ್ರೆಗೆ ಹೋಗುತ್ತಿದ್ದು, ಇದರಲ್ಲಿ ಶೇ 47ರಷ್ಟು ಮಹಿಳೆಯರು ಇದ್ದಾರೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ತನಕ ಹಜ್ ಯಾತ್ರೆ ತೆರಳುವ ಮಹಿಳೆಯರು ಪುರುಷರ (ತಂದೆ,ಸಹೋದರ,ಮಗ) ಜೊತೆ ತೆರಳಬೇಕಿತ್ತು. ಈ ವಿಚಾರದ ಕುರಿತಂತೆ 2017ರ ಅಕ್ಟೋಬರ್‌ನಲ್ಲಿ ಸಂಸದೀಯ ವ್ಯವಹಾರಗಳ ನಿವೃತ್ತ ಕಾರ್ಯದರ್ಶಿ ಅಫ್ಜಲ್ ಅಮನುಲ್ಲಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಈ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದ್ದ ಸಮಿತಿಯೂ, 45 ವರ್ಷ ಮೇಲ್ಪಟ್ಟ ಮಹಿಳೆಯರು ‍ಪುರುಷರಿಲ್ಲದೇ ಯಾತ್ರೆಗೆ ತೆರಳಲು ಅನುಮತಿ ನೀಡಬಹುದು ಎಂದು ತಿಳಿಸಿತ್ತು. ಸಮಿತಿ ಶಿಫಾರಸ್ಸಿನಂತೆ ಸರ್ಕಾರ ಮಹಿಳೆಯರಿಗೆ ಯಾತ್ರೆಗೆ ತೆರಳಲು ಅವಕಾಶ ಕಲ್ಪಿಸಿದೆ.

Desk

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago