ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕಯಾಗಿದೆ. ದೇಶದಲ್ಲಿ ಶನಿವಾರ ಬೆಳಿಗ್ಗೆ 8ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 84,332 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 4,002 ಮಂದಿ ಸಾವನ್ನಪ್ಪಿದ್ದಾರೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,93,59,155ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,67,081ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,21,311 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,79,11,384ಕ್ಕೆ ತಲುಪಿದೆ. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.