News Karnataka Kannada
Monday, May 13 2024
ವಿದೇಶ

ರೇಡಿಯೋ, ಟಿವಿಗಳಲ್ಲಿ ಮಹಿಳೆಯರ ಧ್ವನಿ ಕೇಳುವಂತಿಲ್ಲ: ತಾಲಿಬಾನಿಗಳ ಆದೇಶ

Talibans Rule
Photo Credit :

ಅಫ್ಘಾನಿಸ್ತಾನ : ಆಫ್ಘಾನಿಸ್ತಾನ ವಶಪಡಿಸಿಕೊಂಡ ಬೆನ್ನಲ್ಲೇ ತಾಲಿಬಾನಿಗಳು ಒಂದೊಂದಾಗಿ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದ್ದು, ಇದೀಗ ಕಂದಹಾರ್ ನ ರೇಡಿಯೋ ಮತ್ತು ಟಿವಿ ಚಾನಲ್​ಗಳಲ್ಲಿ ಮಹಿಳೆಯರ ಧ್ವನಿ, ಸಂಗೀತ ಕಾರ್ಯಕ್ರಮವನ್ನು ನಿಷೇಧಿಸಿದ್ದಾರೆ.

ನಾವು ಮಹಿಳೆಯರಿಗೆ ತೊಂದರೆ ಕೊಡುವುದಿಲ್ಲ. ಅವರ ಹಕ್ಕುಗಳನ್ನು ಗೌರವಿಸುತ್ತೇವೆ ಎಂದು ಹೇಳಿದ್ದ ತಾಲಿಬಾನಿಗಳು ನಿಧಾನವಾಗಿ ಮಹಿಳೆಯರ ಮೇಲಿನ ಕಟ್ಟುಪಾಡು ಹೆಚ್ಚಿಸುತ್ತಿದ್ದಾರೆ.

ಆಗಸ್ಟ್​ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಕೆಲವು ಸುದ್ದಿ ವಾಹಿನಿಗಳು ತಮ್ಮಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕರನ್ನು ಕೆಲಸದಿಂದ ತೆಗೆದಿದ್ದವು. ತಾಲಿಬಾನಿಗಳ ಕ್ರೂರ ಕಾನೂನಿಗೆ ಹೆದರಿ ಈ ನಿರ್ಧಾರ ಕೈಗೊಂಡಿದ್ದವು.

ಈ ಮಧ್ಯೆ ತಾಲಿಬಾನ್ ಉಗ್ರರು, ಮಹಿಳೆಯರನ್ನೂ ಕೆಲಸಕ್ಕೆ ಕರೆಯುತ್ತಿದ್ದಾರೆ. ಇಸ್ಲಾಮಿಕ್ ಕಾನೂನಿನಡಿ ಮಹಿಳೆಯರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ನೀಡುವುದಾಗಿ ತಾಲಿಬಾನಿಗಳು ಭರವಸೆ ಕೊಟ್ಟಿದ್ದಾರೆ ಎಂದೂ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಅದೆಲ್ಲದರ ಹೊರತಾಗಿಯೂ ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕಷ್ಟಪಡುತ್ತಿರುವ ಬಗ್ಗೆ ದಿನನಿತ್ಯವೂ ವರದಿಯಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು