ಭುವನೇಶ್ವರ: ಫ್ಯಾನಿ ಚಂಡಮಾರುತ ಬಂದ ವೇಳೆ ಗರ್ಭಿಣಿಯೊಬ್ಬರು ರೈಲ್ವೆ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆಯು ನಡೆದಿದೆ.
ಶುಕ್ರವಾರ ಬೆಳಗ್ಗೆ ಒಡಿಸ್ಸಾಗೆ ಫ್ಯಾನಿ ಚಂಡಮಾರುತವು ಬಡಿದಿದೆ. ಈ ವೇಳೆ ರೈಲ್ವೆ ಆಸ್ಪತ್ರೆಯಲ್ಲಿ ಹುಟ್ಟಿದ ಮಗುವಿಗೆ ಫ್ಯಾನಿ ಹೆಸರನ್ನು ಇಡಲಾಗಿದೆ ಎಂದು ವರದಿಯಾಗಿದೆ.
ಮಹಿಳೆಯು ರೈಲ್ವೆ ಇಲಾಖೆಯಲ್ಲಿ ಸಿಬ್ಬಂದಿಯಾಗಿದ್ದು, ಬೆಳಗ್ಗೆ 11 ಗಂಟೆ ವೇಳೆ ಹೆರಿಗೆಯಾಗಿದೆ. ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.