ಪಟನಾ: ಶಾಲಾ ಆವರಣದಲ್ಲೇ ವಿದ್ಯಾರ್ಥಿಯನ್ನು ಬೆದರಿಸಿ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಶಾಲಾ ಪ್ರಾಂಶುಪಾಲನನ್ನು ಬಂಧಿಸಿದ ಘಟನೆ ಪಟನಾದಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಬೆದರಿಸುವ ಸಲುವಾಗಿ ಶಾಲೆಯ ಕ್ಲರ್ಕ್ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಶಾಲೆಯಿಂದ ಮನೆಗೆ ಬಂದ ಸಂತ್ರಸ್ತೆ ವಾಂತಿ ಮಾಡಿದ್ದಾಳೆ. ಈ ವೇಳೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಗರ್ಭಿಣಿ ಎನ್ನುವುದು ಖಚಿತ ಪಡಿಸಿದ್ದಾರೆ. ವಿಚಾರಣೆ ವೇಳೆ ಪ್ರಾಂಶುಪಾಲನೇ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾಳೆ.
ವಿಚಾರಣೆ ವೇಳೆ ಕಳೆದ 9 ತಿಂಗಳಿನಿಂದ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಾನು ವಿರೋಧ ವ್ಯಕ್ತಪಡಿಸಿದಾಗ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರದ ವೇಳೆ ಶಾಲೆಯ ಕ್ಲರ್ಕ್ವೊಬ್ಬ ಈ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಪೊಲೀಸರ ಬಳಿ ಸಂತ್ರಸ್ತೆ ಹೇಳಿಕೊಂಡಿದ್ದಾಳೆ.
ಈ ಸಂಬಂಧ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಾಂಶುಪಾಲ ಹಾಗೂ ಕ್ಲರ್ಕ್ ನನ್ನು ಬಂಧಿಸಿದ್ದಾರೆ.