ವಿಶಾಖಪಟ್ಟಣಂ: ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆಯು ಗುರುವಾರ ನಡೆದಿದೆ.
ವಿಮಾನ ನಿಲ್ದಾಣದಲ್ಲಿ ಸೆಲ್ಫಿ ತೆಗೆಯು ನೆಪದಲ್ಲಿ ಬಂದ ಯುವಕ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜಗನ್ ಅವರ ಭುಜಕ್ಕೆ ಸ್ವಲ್ಪ ಗಾಯವಾಗಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ವರದಿಗಳು ಹೇಳಿವೆ.