ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ನಾಗರಿಕ ವಿಮಾನಯಾನ ಸಂಸ್ಥೆ ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಘಾನಿಸ್ತಾನವು ಭಾರತದಿಂದ ಮತ್ತೆ ವಾಣಿಜ್ಯ ವಿಮಾನ ಸಂಚಾರ ಆರಂಭಿಸುವಂತೆ ಕೋರಿ ಭಾರತೀಯ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ)ಕ್ಕೆ ಪತ್ರ ಬರೆದಿದೆ.
ಅಫ್ಘಾನಿಸ್ತಾನದ ವಿಮಾನಯಾನ ಸಚಿವ ಅಲ್ಹಜ್ ಹಮೀದುಲ್ಲ ಅಖುಂಝಾದಾ ಈ ಬಗ್ಗೆ ಭಾರತದ ವಿಮಾನಯಾನ ಮುಖ್ಯಸ್ಥ ಅರುಣ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ…
ನಿಮಗೆ ತಿಳಿದಿರುವಂತೆ ಅಮೆರಿಕ ಪಡೆಗಳು ನಿರ್ಗಮಿಸುವ ಮುನ್ನ ವಿಮಾನ ನಿಲ್ದಾಣಕ್ಕೆ ಹಾನಿ ಉಂಟುಮಾಡಿ ತೆರಳಿದ್ದರು. ಈ ಸಂದರ್ಭದಲ್ಲಿ ನಮ್ಮ ಮಿತ್ರ ರಾಷ್ಟ್ರವಾದ ಕತಾರ್ ತಾಂತ್ರಿಕ ಸಹಕಾರದಿಂದ ವಿಮಾನನಿಲ್ದಾನದ ದೋಷಗಳನ್ನು ಸರಿಪಡಿಸಲಾಗಿದೆ. ಈಗ ಕಾಬೂಲ್ ವಿಮಾನನಿಲ್ದಾಣ ವಿಮಾನ ಕಾರ್ಯಚಾಲನೆಗೊಂಡಿದೆ.
ಅಫ್ಘಾನಿಸ್ತಾನದ ದೇಶೀಯ ವಿಮಾನ ಸಂಸ್ಥೆಗಳಾದ ಅರಿಯಾನ ಆಫ್ಘನ್ ಏರ್ ಲೈನ್ ಮತ್ತು ಕಾಮ್ ಏರ್ ವಿಮಾನಗಳು ಭಾರತಕ್ಕೆ ಹಾರಾಟ ಶುರುಮಾಡಲು ಸಿದ್ಧವಾಗಿವೆ. ಅದೇ ರೀತಿ ಭಾರತ ವಿಮಾನಯಾನ ಸಂಸ್ಥೆಗಳೂ ಆಫ್ಘನ್ ನೆಲದ ಮೇಲೆ ಹಾರಾಟ ಮುಂದುವರಿಸಬಹುದು.
ಪತ್ರದಲ್ಲಿ ಭದ್ರತೆಯ ಕುರಿತು ಆತಂಕ ಪಡುವ ಅಗತ್ಯವಿಲ್ಲ ಎಂದು ಅಫ್ಘಾನಿಸ್ತಾನ ಭಾರತಕ್ಕೆ ಭರವಸೆ ನೀಡಿದೆ. ಈ ಹಿಂದೆ ಭಾರತದ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಭಾರತ ಮತ್ತು ಕಾಬೂಲ್ ನಡುವೆ ವಿಮಾನ ಹಾರಾಟ ಸದ್ಯಕ್ಕೆ ಮುಂದುವರಿಯುವ ಸೂಚನೆ ನೀಡಿದ್ದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…