News Karnataka Kannada
Monday, April 29 2024
ವಿದೇಶ

ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನಕ್ಕೆ ಕ್ಷಣಗಣನೆ

Photo Credit :

ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನಕ್ಕೆ ಕ್ಷಣಗಣನೆ

ನವದೆಹಲಿ: ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ಕೆಲ ಕಾಲದಲ್ಲೇ ಶುರುವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಲಸಿಕೆಗಳನ್ನು ಅಭಿವೃದ್ಧಿಪಡಿಸಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಬಗ್ಗೆ ಮಾತನಾಡಿರುವ ಪ್ರಧಾನಿ, ದೇಶವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್‌ ದೇಶೀಯವಾಗಿ ತಯಾರಿಸಿರುವ ಕೋವ್ಯಾಕ್ಸಿನ್ ಲಸಿಕೆಗಳಿಗೆ ಅನುಮತಿ ಸಿಕ್ಕಿರುವುದು ಕೋವಿಡ್ ವಿರುದ್ಧ ಹೋರಾಡಲು ಸಹಕಾರಿ ಆಗಿದೆ. ಭಾರತದಲ್ಲಿ ತಯಾರಾದ ಉತ್ಪನ್ನಗಳಿಗೆ ಜಾಗತಿಕ ಬೇಡಿಕೆ ಮಾತ್ರವಲ್ಲದೆ ಜಾಗತಿಕ ಅಂಗೀಕಾರವೂ ಸಿಕ್ಕಿದೆ ಎಂದರು.

ಭಾರತೀಯ ಉತ್ಪನ್ನಗಳಿಂದ ಜಗತ್ತನ್ನು ತುಂಬಿಸುವುದು ಮುಖ್ಯವಲ್ಲ. ಆದರೆ ನಾವು ವಿಶ್ವದ ಮೂಲೆ ಮೂಲೆಯಲ್ಲಿರುವ ಪ್ರತಿಯೊಬ್ಬ ಗ್ರಾಹಕರ ಹೃದಯವನ್ನು ನಮ್ಮ ಲಸಿಕೆಯ ಗುಣಮಟ್ಟದಿಂದ ಗೆಲ್ಲಬೇಕು’ ಎಂದು ಅವರು ಹೇಳಿದರು.

ಕೋವಿಡ್ ತಡೆ ಲಸಿಕೆ ಕೋವ್ಯಾಕ್ಸಿನ್‌ನ ತುರ್ತು ಬಳಕೆಗೆ ಅನುಮೋದನೆ ಪಡೆದಿರುವ ಭಾರತ್ ಬಯೊಟೆಕ್, ವಾರ್ಷಿಕವಾಗಿ ಲಸಿಕೆಯ 70 ಕೋಟಿ ಡೋಸ್ ಉತ್ಪಾದನಾ ಸಾಮರ್ಥ್ಯದ ನಾಲ್ಕು ಘಟಕಗಳನ್ನು ದೇಶದಲ್ಲಿ ಸ್ಥಾಪಿಸುವುದಾಗಿ ಸೋಮವಾರ ಪ್ರಕಟಿಸಿದೆ.

ಕೋವ್ಯಾಕ್ಸಿನ್ ಲಸಿಕೆ ಪರೀಕ್ಷೆಯ ದತ್ತಾಂಶ ಕೊರತೆ ಇದೆ ಎಂಬ ಆರೋಪವನ್ನು ಅಲ್ಲಗಳೆದ ಭಾರತ್ ಬಯೊಟೆಕ್ ಅಧ್ಯಕ್ಷ ಕೃಷ್ಣ, ಸಾಕಷ್ಟು ಮಾಹಿತಿ ಈಗಾಗಲೇ ಬಹಿರಂಗಗೊಂಡಿದ್ದು, ಅಂತರ್ಜಾಲದಲ್ಲಿ ಲಭ್ಯವಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
204

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು