News Karnataka Kannada
Sunday, April 28 2024
ವಿದೇಶ

ವಿಶ್ವ ನಾಯಕರ ಮೆಚ್ಚುಗೆಗೆ ಪಾತ್ರವಾದ ಭಾರತ

Flag India 09082021
Photo Credit :
ವಾಷಿಂಗ್ಟನ್ : ಕೋವಿಡ್‌ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಪರಿಣಾಮಕಾರಿ ಹೋರಾಟ ನಡೆಸುವುದರ ಜೊತೆಗೆ, ಸೋಂಕು ಮಣಿಸಲು ಇತರೆ ದೇಶಗಳಿಗೆ ನೆರವಾದ ಭಾರತಕ್ಕೆ ವಿಶ್ವಸಂಸ್ಥೆಯಲ್ಲಿ ಹಲವು ದೇಶಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸೆ.21ರಿಂದ ಆರಂಭವಾದ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಅಧಿವೇಶನದಲ್ಲಿ ಹಲವು ವಿಶ್ವ ನಾಯಕರು ಕೋವಿಡ್‌ ವಿರುದ್ಧದ ಹೋರಾಟಕ್ಕಾಗಿ ತ್ವರಿತವಾಗಿ ಲಸಿಕೆ, ವೈದ್ಯಕೀಯ ಉಪಕರಣಗಳನ್ನು ಪೂರೈಸಿದ ಭಾರತ ಹಾಗೂ ಇತರೆ ದೇಶಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನೇಪಾಳ, ಭೂತಾನ್‌, ಆಸ್ಪ್ರೇಲಿಯಾ, ಸುರಿನಾಮ್‌, ನಯುರು, ನೈಜೀರಿಯಾ, ಸೇಂಟ್‌ ಲೂಸಿಯಾ, ಸೇಂಟ್‌ ವಿನ್ಸೆಂಟ್‌ ಮತ್ತು ಗ್ರೆನಾಡಿನೆಸ್‌, ಘಾನಾ, ಫಿಜಿ, ಡೊಮಿನಿಕಾ ಸೇರಿದಂತೆ ಹಲವು ರಾಷ್ಟ್ರಗಳು ಅಧಿವೇಶನದಲ್ಲಿ ಭಾರತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿವೆ.

‘ಕೋವಿಡ್‌ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ನಮ್ಮೊಂದಿಗೆ ಜೊತೆಯಾದ ಭಾರತ ಹಾಗೂ ವಿವಿಧ ರಾಷ್ಟ್ರಗಳಿಗೆ ಅಭಿನಂದನೆಗಳು. ಲಸಿಕೆ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ನೀಡುವ ಮೂಲಕ ನಮ್ಮೊಂದಿಗೆ ಒಗ್ಗಟ್ಟು ಪ್ರದರ್ಶಿಸಿದ್ದರಿಂದ ಕೋವಿಡ್‌ ವಿರುದ್ಧ ಹೋರಾಡಲು ಸಾಧ್ಯವಾಯಿತು’ಎಂದು ಶ್ಲಾಘಿಸಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ನಡುವೆ ಭಾರತ ಸುಮಾರು 100 ದೇಶಗಳಿಗೆ 6.6 ಕೋಟಿಗೂ ಅಧಿಕ ಡೋಸ್‌ ಲಸಿಕೆಗಳನ್ನು ಪೂರೈಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು