ಮುಲ್ತಾನ್ ; ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದ ಬಹವಾಲ್ ನಗರದಲ್ಲಿ ಗುರುವಾರ ಶಿಯಾ ಮುಸ್ಲಿಮರು ಮೆರವಣಿಗೆ ನಡೆಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬೊಂದು ಸ್ಫೋಟಿಸಿ 3 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಪೊಲೀಸರು ಮತ್ತು ಆಂಬುಲೆನ್ಸ್ ದೌಡಾಯಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗಾಯಗೊಂಡ ಜನರು ರಸ್ತೆ ಬದಿಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ. ಶಿಯಾ ಸಮುದಾಯದವರ ಅಶೌರಾ ಹಬ್ಬದ ನಿಮಿತ್ತ ಮೆರವಣಿಗೆ ನಡೆಯುತ್ತಿತ್ತು.
ಶಿಯಾ ಮುಸ್ಲಿಮರ ಮೆರವಣಿಗೆ ಮೇಲೆ ಬಾಂಬ್ ಧಾಳಿ ; ಮೂವರ ಸಾವು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.