News Karnataka Kannada
Friday, May 03 2024
ವಿದೇಶ

ಶೃಂಗಸಭೆ: ಭಯೋತ್ಪಾದನೆ ಸಮರ್ಥವಾಗಿ ನಿಯಂತ್ರಿಸಲು ಬ್ರಿಕ್ಸ್ ಕರೆ

Bricks 10092021
Photo Credit :

ನವದೆಹಲಿ: ಅಫ್ಘಾನಿಸ್ತಾನದ ನೆಲವನ್ನು ಇತರ ದೇಶಗಳ ವಿರುದ್ಧ ಭಯೋತ್ಪಾದಕ ದಾಳಿ ನಡೆಸಲು ಬಳಕೆಯಾಗಬಾರದು ಎಂದು ಐದು ಪ್ರಭಾವಿ ದೇಶಗಳ ಗುಂಪು ಬ್ರಿಕ್ಸ್ ಶೃಂಗಸಭೆ ಗುರುವಾರ ಹೇಳಿದೆ.

ಗಡಿಯಾಚೆಗಿನ ಉಗ್ರ ದಾಳಿ ಸೇರಿದಂತೆ ಯಾವುದೇ ರೀತಿಯ ಭಯೋತ್ಪಾದನೆಯನ್ನು ಸಮರ್ಥವಾಗಿ ನಿಯಂತ್ರಿಸಬೇಕು ಎಂದು ಬ್ರಿಕ್ಸ್ ಕರೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಶೃಂಗಸಭೆಯಲ್ಲಿ ಅಫ್ಘಾನಿಸ್ತಾನದ ಪರಿಸ್ಥಿತಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಗುಂಪು ಸಮಾಲೋಚನೆ ನಡೆಯಿತು.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್‌ನ ಜೈರ್ ಬೋಲ್ಸನಾರೊ ಅವರು ಶೃಂಗ ಸಭೆಯಲ್ಲಿ ಭಾಗವಹಿಸಿದ್ದರು.

ಭಾರತ ಆಯೋಜಿಸಿದ್ದ ಬ್ರಿಕ್ಸ್ ವಾರ್ಷಿಕ ಶೃಂಗಸಭೆಯ ಅಧ್ಯಕ್ಷತೆ ವಹಿಸಿ ವರ್ಚುವಲ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಐದು ರಾಷ್ಟ್ರಗಳು ಬ್ರಿಕ್ಸ್ ಭಯೋತ್ಪಾದನಾ ನಿಗ್ರಹ ಯೋಜನೆಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಿವೆ. ಅಫ್ಘಾನಿಸ್ತಾನವನ್ನು ತಾಲಿಬಾನ್‌ಗಳು ಸ್ವಾಧೀನಪಡಿಸಿಕೊಂಡಿದ್ದರಿಂದ ಈ ಪ್ರದೇಶವು ಹಲವಾರು ಭದ್ರತಾ ಸವಾಲುಗಳನ್ನು ಎದುರಿಸುತ್ತಿದೆ ಎಂದರು.

ಬ್ರಿಕ್ಸ್(ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ) ವಿಶ್ವದ ಐದು ದೊಡ್ಡ ಅಭಿವೃದ್ಧಿ ಹೊಂದುತ್ತಿರುವ ದೇಶಗಳನ್ನು ಒಳಗೊಂಡಿದ್ದು, ಇದು ಜಾಗತಿಕ ಜನಸಂಖ್ಯೆಯ ಶೇ. 41 ರಷ್ಟು, ಜಾಗತಿಕ ಜಿಡಿಪಿಯ ಶೇ. 24 ರಷ್ಟು ಮತ್ತು ಜಾಗತಿಕ ವ್ಯಾಪಾರದ ಶೇ. 16 ರಷ್ಟು ಪ್ರತಿನಿಧಿಸುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು