News Karnataka Kannada
Saturday, May 18 2024
ವಿದೇಶ

ಶ್ರೀರಾಮನ ಅವತಾರದಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡ ಪೋಸ್ಟರ್ ಧ್ವಂಸ

Photo Credit :

ಶ್ರೀರಾಮನ ಅವತಾರದಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡ ಪೋಸ್ಟರ್ ಧ್ವಂಸ

ಪಾಟ್ನಾ: ಶ್ರೀರಾಮನ ಅವತಾರಕ್ಕೆ ರಾಹುಲ್ ಗಾಂಧಿ ಮುಖವನ್ನು ಬಳಸಿ ಕಾಂಗ್ರೆಸ್ ಪಕ್ಷದವರು ಹಾಕಿದ್ದ ಪೋಸ್ಟರ್ ನ್ನು ಅಪರಿಚಿತ ವ್ಯಕ್ತಿಗಳು ಧ್ವಂಸ ಮಾಡಿದ ಘಟನೆ ಶುಕ್ರವಾರ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಕಳೆದ ಕೆಲವು ದಿನಗಳ ಹಿಂದೆ ಪಾಟ್ನಾದಲ್ಲಿ ರಾಹುಲ್ ಗಾಂಧಿ ಅವರು ಶ್ರೀರಾಮನನ್ನು ಹೋಲುವ ನಡೆದಾಡುವ ಶ್ರೀರಾಮ ಎಂಬ ಪೋಸ್ಟರ್ ನ್ನು ಹಾಕಲಾಗಿತ್ತು. ಈ ಪೋಸ್ಟರ್ ನಲ್ಲಿ ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭಾವಚಿತ್ರವೂ ಒಳಗೊಂಡಿತ್ತು.

ಕೇಂದ್ರದ ಬಿಜೆಪಿ ಸರ್ಕಾರವನ್ನು ಗುರಿ ಮಾಡಿ ಈ ಪೋಸ್ಟರ್ ನ್ನು ಹಾಕಲಾಗಿತ್ತು.

ಪೋಸ್ಟರ್ ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಪಾಟ್ನಾ ಸಿವಿಲ್ ಕೋರ್ಟ್ ನಲ್ಲಿ ಬಿಹಾರದ ಕಾಂಗ್ರೆಸ್ ಮುಖ್ಯಸ್ಥ ಮದನ್ ಮೋಹನ್ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಾನುವಾರ ರಾಹುಲ್ ಗಾಂಧಿ ಪಾಟ್ನಾದಲ್ಲಿ ಕಾಂಗ್ರೆಸ್ ನ ಜನ ಆಕಾಂಕ್ಷ ರ್ಯಾಲಿಯಲ್ಲಿ ಪಾಲ್ಗೊಳಲ್ಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು