Categories: ವಿದೇಶ

ಶ್ರೀಲಂಕಾಗೆ ಭಾರತದ ಆಮ್ಲಜನಕ

ನವದೆಹಲಿ: ಕೊರೊನಾ ಮಹಾಮಾರಿಗೆ ತತ್ತರಿಸಿರುವ ಶ್ರೀಲಂಕಾದಲ್ಲಿ   ಅಮ್ಲಜನಕ ಕೊರತೆ ಎದುರಾಗಿರುವ , ಕಾರಣ ಭಾರತ  ಶ್ರೀಲಂಕಾಗೆ 35 ಟನ್ ಆಮ್ಲಜನಕವನ್ನು ಸರಬರಾಜು ಮಾಡಲು ನಿರ್ಧಾರಿಸಿದೆ . ಶ್ರೀಲಂಕಾದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಏಕಾಏಕಿ ಹೆಚ್ಚಳ ಕಂಡ ಪರಿಣಾಮ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ತಲೆದೋರಿತ್ತು.
ಭಾರತ ಎರಡು ಕಂಟೈನರ್ ಗಳಲ್ಲಿ ಆಮ್ಲಜನಕ ಪೂರೈಕೆ ಮಾಡಲಿದೆ. ಇಂದು ಸಂಜೆ ಈ ಕಂಟೈನರ್ ಗಳನ್ನು ಕೊಂಡೊಯ್ಯಲು ಶ್ರೀಲಂಕಾ ನೌಕಾದಳ ತನ್ನ ಹಡಗೊಂದನ್ನು ಚೆನ್ನೈಗೆ ಕಳುಹಿಸಿದೆ. ಎಸ್ ಎಲ್ ಎನ್ ಎಸ್ ಎನ್ನುವ ಹೆಸರಿನ ಶ್ರೀಲಂಕಾ ಹಡಗು ಬುಧವಾರ ಸಂಜೆ ಚೆನ್ನೈ ನಗರವನ್ನು ತಲುಪಿ, ಗುರುವಾರ ಮುಂಜಾನೆ ಆಮ್ಲಜನಕದ ಕಂಟೈನರ್ ಹೊತ್ತುಕೊಂಡು ತನ್ನ ದೇಶಕ್ಕೆ ಮರಳಲಿದೆ.
ಮುಂದಿನ ದಿನಗಳಲ್ಲಿ ಶ್ರೀಲಂಕಾ 100 ಮೆಟ್ರಿಕ್ ಟನ್ ಪ್ರಮಾಣದ ಆಮ್ಲಜನಕವನ್ನು ಭಾರತದಿಂದ ಆಮದು ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಬೇಡಿಕೆಗೆ ತಕ್ಕಂತೆ ಶ್ರೀಲಂಕಾ ಭಾರತದ ಬಳಿ ಆಮ್ಲಜನಕ ಖರೀದಿ ಮಾಡಲಿದೆ.
ಶ್ರೀಲಂಕಾದಲ್ಲಿ ಕೊರೊನಾ ಹಾವಳಿ ಹೆಚ್ಚಳಕ್ಕೆ ಡೆಲ್ಟಾ ವೈರಾಣು ಕಾರಣ ಎಂದು ಅಲ್ಲಿನ ಅರೋಗ್ಯಾಧಿಕಾರಿಗಳು ಈ ಹಿಂದೆ ತಿಳಿಸಿದ್ದರು.
Raksha Deshpande

Recent Posts

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

6 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

6 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

30 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

32 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

52 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

1 hour ago