ಕಾಬೂಲ್: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ ಎಂದು ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿದ್ದಾರೆ.ಅಂದ್ರಾಬ್ ಪ್ರಾಂತ್ಯದಲ್ಲಿ ಉಗ್ರರಿಂದ ಮನೆ ಮನೆ ಶೋಧವಾಗುತ್ತಿದೆ. ಈ ಹೊತ್ತಿನಲ್ಲೇ ಅಫ್ಘಾನ್ನ ಮಾಜಿ ಉಪಾಧ್ಯಕ್ಷ, ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ.
ದೇವರಿಗೆ ಮಾತ್ರ ನನ್ನನ್ನು ಇಲ್ಲಿಂದ ತೆರವುಗೊಳಿಸಲು ಸಾಧ್ಯ. ಆದರೆ ನನ್ನ ದೇಹ ಈ ಮಣ್ಣಿನಲ್ಲಿ ಐಕ್ಯವಾಗುತ್ತದೆ. ಅಫ್ಘಾನಿಸ್ತಾನ ಮತ್ತು ನಾನು ಒಂದೇ. ಇಲ್ಲಿಂದ ಹೊರದಬ್ಬಲು ಯಾರಿಂದಲೂ ಆಗದು, ನಾನು ಕೂಡಾ ಹೊರಗೆ ಹೋಗಲಾರೆ. ಈ ಮಣ್ಣಿನಲ್ಲೇ ನನ್ನ ದೇಹ ಮಣ್ಣಾಗಿ ಹೋಗಲಿ ಎನ್ನುವ ಮೂಲಕ ಉಗ್ರರಿಗೆ ಹೆದರುವುದಿಲ್ಲ ಎಂಬ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. ಅಫ್ಘಾನಿಸ್ತಾನದ ಉಪಾಧ್ಯಕ್ಷರಾಗಿದ್ದ ಅಮರುಲ್ಲಾ ಸಲೇಹ್ ಕೆಲ ದಿನಗಳ ಹಿಂದಷ್ಟೇ ನಾನೀಗ ಅಫ್ಘಾನಿಸ್ತಾನದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದರು.
ಸತ್ತರೂ ಅಫ್ಘಾನಿಸ್ಥಾನ ಬಿಟ್ಟು ಹೋಗುವುದಿಲ್ಲ ಎಂದ ಸ್ವಯಂ ಘೋಷಿತ ಅದ್ಯಕ್ಷ ಅಮರುಲ್ಲಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.