Categories: ವಿದೇಶ

ಸತ್ತರೂ ಅಫ್ಘಾನಿಸ್ಥಾನ ಬಿಟ್ಟು ಹೋಗುವುದಿಲ್ಲ ಎಂದ ಸ್ವಯಂ ಘೋಷಿತ ಅದ್ಯಕ್ಷ ಅಮರುಲ್ಲಾ

ಕಾಬೂಲ್: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ ಎಂದು ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿದ್ದಾರೆ.ಅಂದ್ರಾಬ್ ಪ್ರಾಂತ್ಯದಲ್ಲಿ ಉಗ್ರರಿಂದ ಮನೆ ಮನೆ ಶೋಧವಾಗುತ್ತಿದೆ. ಈ ಹೊತ್ತಿನಲ್ಲೇ ಅಫ್ಘಾನ್‍ನ ಮಾಜಿ ಉಪಾಧ್ಯಕ್ಷ, ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ.
ದೇವರಿಗೆ ಮಾತ್ರ ನನ್ನನ್ನು ಇಲ್ಲಿಂದ ತೆರವುಗೊಳಿಸಲು ಸಾಧ್ಯ. ಆದರೆ ನನ್ನ ದೇಹ ಈ ಮಣ್ಣಿನಲ್ಲಿ ಐಕ್ಯವಾಗುತ್ತದೆ. ಅಫ್ಘಾನಿಸ್ತಾನ ಮತ್ತು ನಾನು ಒಂದೇ. ಇಲ್ಲಿಂದ ಹೊರದಬ್ಬಲು ಯಾರಿಂದಲೂ ಆಗದು, ನಾನು ಕೂಡಾ ಹೊರಗೆ ಹೋಗಲಾರೆ. ಈ ಮಣ್ಣಿನಲ್ಲೇ ನನ್ನ ದೇಹ ಮಣ್ಣಾಗಿ ಹೋಗಲಿ ಎನ್ನುವ ಮೂಲಕ ಉಗ್ರರಿಗೆ ಹೆದರುವುದಿಲ್ಲ ಎಂಬ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. ಅಫ್ಘಾನಿಸ್ತಾನದ ಉಪಾಧ್ಯಕ್ಷರಾಗಿದ್ದ ಅಮರುಲ್ಲಾ ಸಲೇಹ್ ಕೆಲ ದಿನಗಳ ಹಿಂದಷ್ಟೇ ನಾನೀಗ ಅಫ್ಘಾನಿಸ್ತಾನದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದರು.

Indresh KC

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

7 seconds ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

17 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

31 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

47 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago