News Karnataka Kannada
Sunday, May 19 2024
ವಿದೇಶ

ಸಾಮೂಹಿಕ ಅತ್ಯಾಚಾರ: ಎಸ್ಪಿ ಸೇರಿದಂತೆ ನಾಲ್ವರು ಪೊಲೀಸರ ಅಮಾನತು

Photo Credit :

ಸಾಮೂಹಿಕ ಅತ್ಯಾಚಾರ: ಎಸ್ಪಿ ಸೇರಿದಂತೆ ನಾಲ್ವರು ಪೊಲೀಸರ ಅಮಾನತು

ಲಖನೌ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಥರಸ್ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ.

ಘಟನೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಶುಕ್ರವಾರ ಪ್ರಾಥಮಿಕ ವರದಿ ನೀಡಿದ್ದು, ಇದರ ಆಧಾರದ ಮೇಲೆ ಹಾಥರಸ್ ಎಸ್‌ಪಿ ವಿಕ್ರಾಂತ್ ವೀರ್ ಹಾಗೂ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ವಿನೀತ್ ಜೈಸ್ವಾಲ್ ಅವರನ್ನು ಹಾಥರಸ್‌ ಎಸ್‌ಪಿ ಆಗಿ ನಿಯೋಜಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.

ದೆಹಲಿ ಸೇರಿದಂತೆ ದೇಶದಾದ್ಯಂತ ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಸದಸ್ಯರು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು