News Karnataka Kannada
Sunday, May 12 2024
ವಿದೇಶ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ

Photo Credit :

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ

ದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ೪೮ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ ಇವರು, 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಜೀವನ ಆರಂಭಿಸಿದ್ದರು. ರಮಣ ಅವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು