News Karnataka Kannada
Monday, May 06 2024
ವಿದೇಶ

ಸೆಪ್ಟೆಂಬರ್ 24ರಂದು ಬೈಡನ್‌- ಮೋದಿ ಭೇಟಿ

Baiden Modi 14092021
Photo Credit :

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನೇತೃತ್ವದಲ್ಲಿ ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಮೊದಲ ಕ್ವಾಡ್‌ ಶೃಂಗಸಭೆಯನ್ನು ಆಯೋಜಿಸಲಾಗಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಭಾಗವಹಿಸಲಿದ್ದಾರೆ.

ಕೋವಿಡ್-19 ವಿರುದ್ಧದ ಹೋರಾಟ, ಹವಾಮಾನ ಬಿಕ್ಕಟ್ಟು, ಇಂಡೋ- ಪೆಸಿಫಿಕ್‌ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ, ಮತ್ತು ಭದ್ರತೆಯನ್ನು ಸ್ಥಾಪಿಸುವಲ್ಲಿ ಉಭಯ ದೇಶಗಳು ಹೇಗೆ ಜತೆಯಾಗಿ ಕೆಲಸ ಮಾಡಬಹುದು ಎಂಬುದರ ಬಗ್ಗೆ ನಾಯಕರು ಚರ್ಚಿಸಲಿದ್ದಾರೆ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಸಾಕಿ ಹೇಳಿದ್ದಾರೆ.

ಕ್ವಾಡ್‌ ಶೃಂಗಸಭೆಯನ್ನು ಆಯೋಜಿಸುವ ಮೂಲಕ 21ನೇ ಶತಮಾನದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಉಭಯದ ದೇಶಗಳ ನಡುವೆ ಬಾಂಧವ್ಯ ವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಜತೆಗೆ, ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ತೊಡಗಿಸಿಕೊಳ್ಳುವ ಬೈಡೆನ್-ಹ್ಯಾರಿಸ್ ಆಡಳಿತದ ಆದ್ಯತೆಯನ್ನು ತೋರಿಸುತ್ತದೆ ಎಂದು ಸಾಕಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು