Categories: ವಿದೇಶ

ಸೇವಾ ಪರಮೋ ಧರ್ಮ : ಪ್ರಧಾನಿ ಮೋದಿ

ನ್ಯೂಯಾರ್ಕ್: 12 ವರ್ಷ ಹಾಗೂ ಮೇಲ್ಪಟ್ಟ ವ್ಯಕ್ತಿಗಳಿಗೆ ನೀಡಬಹುದಾದ ಡಿಎನ್ಎಯನ್ನು ಅಭಿವೃದ್ಧಿಪಡಿಸಿರುವ ಮೊದಲ ದೇಶ ಭಾರತ ಎಂದು ಪ್ರಧಾನಿ ಮೋದಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದಾರೆ.

ಸೇವಾ ಪರಮೋ ಧರ್ಮ ( ಸೇವೆಯೇ ಮುಖ್ಯ ಕರ್ತವ್ಯ) ಎಂಬ ತತ್ವವನ್ನು ಭಾರತ ಜೀವಿಸುತ್ತಿದ್ದು, ಸೀಮಿತ ಸಂಪನ್ಮೂಲಗಳ ನಡುವೆಯೂ ಲಸಿಕೆ ಅಭಿವೃದ್ಧಿ ಹಾಗೂ ಉತ್ಪಾದನೆಯನ್ನು ಮಾಡಿದೆ. ಭಾರತ ವಿಶ್ವದ ಮೊದಲ ಡಿಎನ್ಎ ಲಸಿಕೆಯನ್ನು ತಯಾರಿಸಿದೆ ಎಂದು ಯುಎನ್ ಜಿಎ ಗೆ ಹೇಳುತ್ತಿದ್ದೇನೆ” ಎಂದಿದ್ದಾರೆ ಮೋದಿ.

ಕಳೆದ ತಿಂಗಳು ಭಾರತದ ಔಷಧ ನಿಯಂತ್ರಕ ಝೈಡಸ್ ಕ್ಯಾಡಿಲಾಗೆ ತುರ್ತು ಬಳಕೆಗೆ ಅನುಮೋದನೆ ನೀಡಿತ್ತು. ಇದನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಇದು 12 ವರ್ಷ ಹಾಗೂ ಮೇಲ್ಪಟ್ಟವರಿಗೆ ನೀಡಬಹುದಾಗಿರುವ ಸೂಜಿ ರಹಿತ ಕೋವಿಡ್ -19 ಲಸಿಕೆಯಾಗಿದೆ.

ಮತ್ತೊಂದು ಎಂಆರ್ ಎನ್ಎ ಲಸಿಕೆ ಕೊನೆಯ ಹಂತದ ಅಭಿವೃದ್ಧಿಯಲ್ಲಿದ್ದು, ಕೊರೋನಾಗೆ ಮೂಗಿನ ಲಸಿಕೆ ಅಭಿವೃದ್ಧಿಪಡಿಸುವುದಕ್ಕೂ ಭಾರತದಲ್ಲಿ ವಿಜ್ಞಾನಿಗಳು ತೊಡಗಿದ್ದಾರೆ. ಮನುಕುಲದೆಡೆಗೆ ಭಾರತ ತನ್ನ ಜವಾಬ್ದಾರಿಯನ್ನು ಅರಿತು ಭಾರತ ವಿಶ್ವದಲ್ಲಿ ಅಗತ್ಯವಿರುವವರಿಗೆ ನೀಡಲು ಮುಂದಾಗಿದೆ. ಭಾರತದಲ್ಲಿ ಲಸಿಕೆಯನ್ನು ಉತ್ಪಾದಿಸಲು ಜಗತ್ತಿನ ಲಸಿಕೆ ತಯಾರಕರಿಗೆ ನಾನು ಕರೆ ನೀಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

Raksha Deshpande

Recent Posts

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

12 seconds ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

14 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

27 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago