ಸಿಂಗಾಪುರ: ಲಂಡನ್‌ನಿಂದ ಬಂದ ಸಿಂಗಾಪುರ ಏರ್‌ಲೈನ್ಸ್ ವಿಮಾನದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆ ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಸಿಂಗಾಪುರಕ್ಕೆ ಹೋಗುತ್ತಿದ್ದ ಬೋಯಿಂಗ್ 777-300ER ಅನ್ನು ಬ್ಯಾಂಕಾಕ್‌ಗೆ ತಿರುಗಿಸಲಾಯಿತು. ಸ್ಥಳೀಯ ಕಾಲಮಾನ 15:45 ಕ್ಕೆ ಇಳಿಸಲಾಯಿತು. SQ 321 ವಿಮಾನವು ಒಟ್ಟು 211 ಪ್ರಯಾಣಿಕರು ಮತ್ತು 18 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು ಎಂದು ಏರ್‌ಲೈನ್ ತಿಳಿಸಿದೆ.
ಸಿಂಗಾಪುರ ಏರ್‌ಲೈನ್, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಪ್ರಯಾಣಿಕರಿಗೆ ವೈದ್ಯಕೀಯ ನೆರವು ನೀಡಲು ಥಾಯ್ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ. ಅಗತ್ಯವಿರುವ ಯಾವುದೇ ಹೆಚ್ಚುವರಿ ಸಹಾಯವನ್ನು ಒದಗಿಸಲು ಬ್ಯಾಂಕಾಕ್‌ಗೆ ತಂಡವನ್ನು ಕಳುಹಿಸಲಾಗುವುದು ಎಂದು ತಿಳಿಸಿದೆ.

