ಪುಣೆ: ನಿರ್ಮಾಣ ಹಂತದಲ್ಲಿದ್ದ 14 ಅಂತಸ್ಥಿನ ಕಟ್ಟಡವೊಂದು ಕುಸಿದಿದ್ದರಿಂದ 9 ಜನ ಮೃತಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆ ಹೊರವಲಯದಲ್ಲಿ ನಡೆದಿದೆ.
ಮಹಾರಾಷ್ಟ್ರದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ 14ನೇ ಅಂತಸ್ಥಿನಲ್ಲಿ ಕಟ್ಟಡದ ಸ್ಲಾಬ್ ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದಿದ್ದು ಅವಶೇಷದಡಿ ಸಿಲುಕಿ 9 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿರುವವರಿಗಾಗಿ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.